
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ.

ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ವಾದ ಪ್ರತಿವಾದ ಆಲಿಸಿ ಜಾಮೀನು ಆದೇಶ ಕುರಿತು ಇಂದಿಗೆ ತೀರ್ಪು ಕಾಯ್ದಿರಿದ್ದರು. ಇದೀಗ ತೀರ್ಪು ಪ್ರಕಟಿಸಿದ್ದು ನಟ ದರ್ಶನ್ ಗೆ 6 ವಾರಗಳ ಕಾಲ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.
ಇನ್ನು ನಟ ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಬಹುದಾಗಿದ್ದು, ಒಂದು ವಾರದಲ್ಲಿ ಚಿಕಿತ್ಸೆ ವಿವರ ಕೊಡಬೇಕು. ಮತ್ತು ಪಾಸ್ ಪೋರ್ಟ್ ಸರಂಡರ್ ಮಾಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
– ಜಾಹೀರಾತು –







