BREAKING

Dropdown with Dependent Values
Uncategorized

ಭವಾನಿ ರೇವಣ್ಣಗೆ ‘ಸುಪ್ರೀಂ’ ಬಿಗ್ ರಿಲೀಫ್..!

ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಹಿರಿಸೊಸೆ , ಹೆಚ್ ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ದೊಡ್ಡ ರಿಲೀಫ್ ಸಿಕ್ಕಿದೆ. ಕೆಆರ್ ನಗರ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ.

ಭವಾನಿ ರೇವಣ್ಣಗೆ ನೀಡಿರುವ ಜಾಮೀನಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್​ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್​ ಶುಕ್ರವಾರ ಸ್ಪಷ್ಟ ಪಡಿಸಿದೆ. ಇದರೊಂದಿಗೆ, ಭವಾನಿ ರೇವಣ್ಣ ನಿಟ್ಟುಸಿರು ಬಿಡುವಂತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಭವಾನಿ ರೇವಣ್ಣಗೆ ಜಾಮೀನು ನೀಡಬಾರದು ಎಂದು ಎಸ್​ಐಟಿ ಪರ ವಕೀಲರು ವಾದ ಮಂಡಿಸಿದ್ದು,. ಆರೋಪಿ ಮಹಿಳೆ ಪ್ರಕರಣದಲ್ಲಿ ನೇರವಾಗಿ ಸಂಬಂಧ ಹೊಂದಿದ್ದಾರೆ ಅಲ್ಲದೆ ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಕೂಡ ಆಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಸುಪ್ರೀಂ ಕೋರ್ಟ್​ನಲ್ಲಿ ಎಸ್​ಐಟಿ ಅಧಿಕಾರಿಗಳ ಪರ ವಕೀಲರು ವಾದ ಮಂಡಿಸಿದ್ದಾರೆ.ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ನ್ಯಾಯಪೀಠ ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಆರೋಪಿ ಮಗ ಮತ್ತು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ. ಪ್ರತಿಷ್ಠಿತ ರಾಜಕೀಯ ಕುಟುಂಬ ಎಂದು ಜಾಮೀನು ರದ್ದು ಮಾಡಲಾಗದು ಎಂದು ನ್ಯಾಯಪೀಠ ಹೇಳಿದೆ.

Leave A Reply

Your email address will not be published. Required fields are marked *

Related Posts