
ಬೆಂಗಳೂರು : ಸಾಲು ಸಾಲು ಹಗರಣಗಳಿಂದ ಕಂಗೆಟ್ಟಿರುವ ಸಿಎಂ ಸಿದ್ದು ಸರ್ಕಾರದ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆಯಲ್ಲಿನ ನೇಮಕಾತಿ,ಬಡ್ತಿ ಹಾಗೂ ವರ್ಗಾವಣೆ ವಿಚಾರದಲ್ಲಿ ಭಾರೀ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ಬೆನ್ನಲ್ಲೆ ಸಿಎಂ ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದೆ.
ಅಬಕಾರಿ ಸಚಿವರು ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದ ಅಂಗಡಿಗಳಿಂದ ಪ್ರತಿ ತಿಂಗಳಿಗೆ 15 ಕೋಟಿ ರೂಪಾಯಿಯಂತೆ ವರ್ಷಕ್ಕೆ 180 ಕೋಟಿ ರೂ. ಲಂಚ ಪಡೆಯುತ್ತಿದ್ದಾರೆ. ವರ್ಗಾವಣೆ ದಂಧೆ, ಲೈಸೆನ್ಸ್ ಮಂಜೂರಾತಿ, ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಸೇರಿದಂತೆ ಅಬಕಾರಿ ಸಚಿವರು ವರ್ಷಕ್ಕೆ ಸುಮಾರು 500 ಕೋಟಿ ರೂ. ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ಇನ್ನೂ, ಭ್ರಷ್ಟಾಚಾರ ನಡೆದಿದೆ ಎಂಬ ಬಿಜೆಪಿ ಆರೋಪವನ್ನು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಳ್ಳಿಹಾಕಿದ್ದಾರೆ. ಇದು ನನ್ನ ವಿರುದ್ಧದ ರಾಜಕೀಯ ಷಡ್ಯಂತ್ರ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ .ನನ್ನ ಮೇಲೆ ಬಂದಿರುವ ಆರೋಪ ರಾಜಕೀಯ ಷಡ್ಯಂತ್ರ ಅಷ್ಟೇ ಎಂದಿದ್ದಾರೆ. ನಮ್ಮ ಇಲಾಖೆಯಲ್ಲಿ ಈ ರೀತಿಯ ಯಾವುದೇ ಅವ್ಯವಹಾರ ನಡೆದಿಲ್ಲ. ಇಲಾಖೆಯಲ್ಲಿ ಯಾವುದೇ ನೇಮಕಾತಿ ನಡೆದಿಲ್ಲ, ಯಾವುದೇ ವರ್ಗಾವಣೆ ನಡೆದಿಲ್ಲ. ಯಾವುದೇ ಬಡ್ತಿ ನೀಡಿಲ್ಲ ಎಂದು ತಿಮ್ಮಾಪುರ ಸ್ಪಷ್ಟಪಡಿಸಿದ್ದಾರೆ
.


