
ಮೈಸೂರು,ನವೆಂಬರ್ 14, 2024 : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಇಂದು (ನವೆಂಬರ್ 14) ರಂದು ಬೆಳಗ್ಗೆ 11 ಗಂಟೆಯಿಂದ ದೊಡ್ಡಕೆರೆ ಮೈದಾನದ ವಸ್ತುಪ್ರದರ್ಶನ ಆವರಣದಲ್ಲಿ ಮಕ್ಕಳ ದಿನಾಚರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸುಮಾರು 3000 ಮಕ್ಕಳು ವಸ್ತುಪ್ರದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇರುತ್ತದೆ.
ಈ ಹಿನ್ನೆಲೆ ಬೆಳಗ್ಗೆ 11 ಗಂಟೆಯಿಂದಲೇ ಆರೋಗ್ಯ ಮತ್ತು ಸ್ವಚ್ಚತಾ ಉಪಸಮಿತಿ ವತಿಯಿಂದ ಮಕ್ಕಳಿಗೆ ಮಾತ್ರ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಮಕ್ಕಳ ದಿನಾಚರಣೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್‌ಖಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



